ನವದೆಹಲಿ: ಹಿರಿಯ ಕ್ರಿಕೆಟಿಗ ಗೌತಮ್ ಗಂಭೀರ್ ರಣಜಿ ಋತು ಆರಂಭಕ್ಕೂ ಮೊದಲೇ ದೆಹಲಿ ತಂಡಕ್ಕೆ ಶಾಕ್ ಕೊಟ್ಟಿದ್ದಾರೆ. ದೆಹಲಿ ತಂಡದ ನಾಯಕರಾಗಿದ್ದ ಗಂಭೀರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ಬದಲಿಗೆ ಟೀಂ ಇಂಡಿಯಾದ ಇನ್ನೊಬ್ಬ ಆಟಗಾರ ಇಶಾಂತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.ಸಂಪೂರ್ಣವಾಗಿ ಒಬ್ಬ ಆಟಗಾರನಾಗಿ ತೊಡಗಿಸಿಕೊಳ್ಳಲು ಬಯಸುವುದರಿಂದ ನಾಯಕತ್ವದ ಜವಾಬ್ದಾರಿಯಿಂದ ಕೆಳಗಿಳಿಯುವುದಾಗಿ ಗಂಭೀರ್ ದೆಹಲಿ ಕ್ರಿಕೆಟ್ ಸಂಸ್ಥೆಗೆ ಬರೆದ ರಾಜೀನಾಮೆ ಪತ್ರದಲ್ಲಿ ವಿವರಿಸಿದ್ದಾರೆ. ಇದಲ್ಲದೆ, ಕೋಚ್ ಕೆಪಿ