ಮುಂಬೈ: ಕೊರೋನಾ ವಿರುದ್ಧದ ಹೋರಾಟಕ್ಕೆ ಕ್ರಿಕೆಟಿಗರು ದೇಣಿಗೆ ನೀಡುವ ಮೂಲಕ ನೆರವಾಗುತ್ತಿದ್ದಾರೆ. ಆದರೆ ಟೀಂ ಇಂಡಿಯಾ ಕ್ರಿಕೆಟಿಗ ಹನುಮ ವಿಹಾರಿ ಮಾಡುತ್ತಿರುವ ಕೆಲಸ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.ಹನುಮ ವಿಹಾರಿ ತಮ್ಮದೇ 100 ಜನ ಸ್ವಯಂ ಸೇವಕರ ತಂಡ ಕಟ್ಟಿಕೊಂಡು ಸಂಕಷ್ಟಕ್ಕೀಡಾದವರಿಗೆ ಸಹಾಯ ಮಾಡುತ್ತಿದ್ದಾರೆ. ಅಗತ್ಯವಿರುವವರಿಗೆ ಆಕ್ಸಿಜನ್, ವೆಂಟಿಲೇಟರ್, ಔಷಧಿ ವ್ಯವಸ್ಥೆ ಮಾಡಿಕೊಡುವ ಕೆಲಸ ಮಾಡುತ್ತಿದ್ದಾರೆ.‘ಇದೆಲ್ಲವನ್ನೂ ನಾನು ನನ್ನನ್ನು ವೈಭವೀಕರಿಸಲು ಮಾಡುತ್ತಿಲ್ಲ. ಸ್ಥಳೀಯ ಜನರಿಗೆ ನೆರವಾಗುವ ದೃಷ್ಟಿಯಿಂದ ನನ್ನ ಕೈಲಾದ ಕೆಲಸ