ಮುಂಬೈ: ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿ ಅವರ ಚ್ಯಾರಿಟಿಯೊಂದಕ್ಕೆ ಕೊರೋನಾ ವಿರುದ್ಧ ಹೋರಾಡಲು ಸಹಾಯ ಮಾಡಿ ಎಂದು ಕೇಳಿಕೊಂಡಿದ್ದ ಟೀಂ ಇಂಡಿಯಾ ಕ್ರಿಕೆಟಿಗ ಹರ್ಭಜನ್ ಸಿಂಗ್ ಮತ್ತು ಯುವರಾಜ್ ಸಿಂಗ್ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿತ್ತು.ಈ ಬಗ್ಗೆ ಪ್ರತಿಕ್ರಿಯಿಸಿರುವ ಭಜಿ ಇಲ್ಲಿ ಧರ್ಮದ ಪ್ರಶ್ನೆ ಬರುವುದಿಲ್ಲ. ಮಾನವೀಯತೆಯ ದೃಷ್ಟಿಯಿಂದ ಸಹಾಯಕ್ಕೆ ಮನವಿ ಮಾಡಿದ್ದೆವು ಎಂದು ಸಮರ್ಥಿಸಿಕೊಂಡಿದ್ದಾರೆ.ಧರ್ಮದ ಪ್ರಶ್ನೆಯಲ್ಲ. ಕೇವಲ ಮಾನವೀಯತೆಯ ಪ್ರಶ್ನೆ. ಅದಕ್ಕಾಗಿ ಇದನ್ನು ಮಾಡಿದೆವು. ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ.