ಕಾನ್ಪುರ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ಅಂತಿಮ ಮತ್ತು ಮೂರನೇ ಏಕದಿನ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಫೈನಲ್ ಕಳೆ ಬಂದಿದೆ. ಕಾನ್ಪುರದ ಗ್ರೀನ್ ಪಿಚ್ ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಉಭಯ ತಂಡಗಳೂ ಸಿದ್ಧವಾಗಿವೆ. ಎರಡೂ ತಂಡಗಳು ತಲಾ ಒಂದು ಪಂದ್ಯ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಿವೆ. ಹಾಗಾಗಿ ಇಂದಿನ ಪಂದ್ಯ ನಿರ್ಣಾಯಕವೆನಿಸಲಿದೆ.ಭಾರತ ಮೊದಲ ಪಂದ್ಯದಲ್ಲಿ ಮೈಮರೆತು ಸೋಲನ್ನಪ್ಪಿದರೂ, ಎರಡನೇ ಪಂದ್ಯದಲ್ಲಿ ತಿರುಗೇಟು ನೀಡಿದೆ. ಹಾಗಿದ್ದರೂ