ನವದೆಹಲಿ: ದ.ಆಫ್ರಿಕಾದ ಮಾಜಿ ಕ್ರಿಕೆಟಿಗ ಜಾಂಟಿ ರೋಡ್ಸ್ ಭಾರತೀಯರು ಪವಿತ್ರವೆಂದು ಪೂಜಿಸುವ ಗಂಗಾನದಿಯಲ್ಲಿ ಸ್ನಾನ ಮಾಡಿ ಗಮನ ಸೆಳೆದಿದ್ದಾರೆ.ಹೃಷಿಕೇಶ್ ನಲ್ಲಿ ಯೋಗ ಸಮ್ಮೇಳನಕ್ಕೆ ಆಗಮಿಸಿದ್ದ ಜಾಂಟಿ ರೋಡ್ಸ್ ಪವಿತ್ರ ಗಂಗಾನದಿಯಲ್ಲಿ ಸ್ನಾನ ಮಾಡಿದ್ದಾರೆ. ಈ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.ಇದಕ್ಕೆ ಪ್ರತಿಕ್ರಿಯಿಸಿರುವ ಭಾರತೀಯ ಕ್ರಿಕೆಟಿಗ ಹರ್ಭಜನ್ ಸಿಂಗ್ ಮುಂದಿನ ಬಾರಿ ಹೋದಾಗ ನನ್ನನ್ನೂ ಕರೆದುಕೊಂಡು ಹೋಗಿ ಎಂದು ಮನವಿ ಮಾಡಿದ್ದಾರೆ.