ಟ್ರೆಂಟ್ ಬ್ರಿಡ್ಜ್: ಬರೋಬ್ಬರಿ ಎರಡು ವರ್ಷಗಳ ಬಳಿಕ ಕೆಎಲ್ ರಾಹುಲ್ ಟೀಂ ಇಂಡಿಯಾ ಟೆಸ್ಟ್ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಂಡಿದ್ದರು. ಇಷ್ಟು ದಿನ ಸೀಮಿತ ಓವರ್ ಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಟೆಸ್ಟ್ ತಂಡಕ್ಕೆ ಅವರಿಗೆ ಮರು ಅವಕಾಶ ಸಿಕ್ಕಿರಲಿಲ್ಲ. ಪ್ರತಿಭಾವಂತ ಯುವ ಕ್ರಿಕೆಟಿಗ ಶುಬ್ನಂ ಗಿಲ್ ಗಾಯಗೊಂಡ ಹಿನ್ನಲೆಯಲ್ಲಿ ಇಂಗ್ಲೆಂಡ್ ಸರಣಿಗೆ ಅಕಸ್ಮಾತ್ತಾಗಿ ಅವರು ಮತ್ತೆ ಓಪನರ್ ಆಗಿ ಕಣಕ್ಕಿಳಿಯುವ ಪರಿಸ್ಥಿತಿ ಬಂದಿದೆ.ಇದನ್ನು ಅವರೀಗ ಎರಡೂ ಕೈಗಳಿಂದ ಬಾಚಿಕೊಂಡಿದ್ದಾರೆ.