ನಾಗ್ಪುರ: ನಿನ್ನೆ ಜಸ್ಪ್ರೀತ್ ಬುಮ್ರಾ ಬೌಲಿಂಗ್ ಅದ್ಭುತವಾಗಿತ್ತು ಎಂದೇ ಎಲ್ಲರೂ ಮಾತಾಡಿಕೊಳ್ಳುತ್ತಿದ್ದಾರೆ. ಆದರೆ ಕನ್ನಡಿಗ ಕೆಎಲ್ ರಾಹುಲ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ್ದಕ್ಕೇ ಟೀಂ ಇಂಡಿಯಾ ಉತ್ತಮ ಮೊತ್ತ ದಾಖಲಿಸಲು ಸಾಧ್ಯವಾಯಿತು. ಅವರು ನಿನ್ನೆ ಇಂಗ್ಲೆಂಡ್ ವಿರುದ್ಧ ಭಾರತೀಯ ಬ್ಯಾಟ್ಸ್ ಮನ್ ಒಬ್ಬ ಟಿ-ಟ್ವೆಂಟಿ ಪಂದ್ಯಗಳಲ್ಲಿ ಅತೀ ಹೆಚ್ಚು ವೈಯಕ್ತಿಕ ರನ್ ಮಾಡಿದ ದಾಖಲೆ ಮಾಡಿದರು. ಇದಕ್ಕೂ ಮೊದಲು ವೀರೇಂದ್ರ ಸೆಹ್ವಾಗ್ 2007 ರಲ್ಲಿ ಸೆಹ್ವಾಗ್ 68 ರನ್ ಗಳಿಸಿದ್ದು