ಕಟಕ್: ಇಂದಿನಿಂದ ಭಾರತ ಮತ್ತು ಶ್ರೀಲಂಕಾ ನಡುವೆ ಟಿ20 ಸರಣಿ ಆರಂಭವಾಗುತ್ತಿದ್ದು, ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಗೆ ಕೊಹ್ಲಿ ಅನುಪಸ್ಥಿತಿಯೇ ಲಾಭವಾಗಲಿದೆಯಾ? ಕಳೆದ ಕೆಲವು ದಿನಗಳಿಂದ ದುರಾದೃಷ್ಟವಶಾತ್ ಅವಕಾಶ ವಂಚಿತರಾಗುತ್ತಿರುವ ರಾಹುಲ್ ಗೆ ಈ ಪಂದ್ಯದಲ್ಲಿ ಹಂಗಾಮಿ ನಾಯಕ ರೋಹಿತ್ ಶರ್ಮಾ ಜತೆ ಇನಿಂಗ್ಸ್ ಆರಂಭಿಸುವ ಅವಕಾಶ ಲಭಿಸುವ ಸಾಧ್ಯತೆ ಹೆಚ್ಚಾಗಿದೆ.ಇತ್ತೀಚೆಗೆ ಟಿ20 ಪಂದ್ಯಗಳಲ್ಲಿ ಕೊಹ್ಲಿಯೇ ರೋಹಿತ್ ಜತೆ ಇನಿಂಗ್ಸ್ ಆರಂಭಿಸುತ್ತಿದ್ದರು. ಇದರಿಂದಾಗಿ ರಾಹುಲ್ ಅವಕಾಶ