ದುಬೈ: ಧೋನಿ ಭಾರತೀಯ ಕ್ರಿಕೆಟ್ ನ ಅತ್ಯುತ್ತಮ ವಿಕೆಟ್ ಕೀಪರ್, ಬ್ಯಾಟ್ಸ್ ಮನ್. ಅವರ ಸ್ಥಾನವನ್ನು ತುಂಬಲು ನನ್ನಿಂದ ಸಾಧ್ಯವಿಲ್ಲ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕರಾಗಿರುವ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಹೇಳಿಕೊಂಡಿದ್ದಾರೆ. ಸೀಮಿತ ಓವರ್ ಗಳ ಪಂದ್ಯದಲ್ಲಿ ಈಗಾಗಲೇ ರಾಹುಲ್ ವಿಕೆಟ್ ಕೀಪರ್ ಆಗಿ ಸ್ಥಾನ ಭದ್ರಪಡಿಸಿಕೊಳ್ಳುತ್ತಿದ್ದಾರೆ. ಆದರೆ ಧೋನಿ ಸ್ಥಾನವನ್ನು ಭಾರತ ತಂಡದಲ್ಲಿ ಭರ್ತಿ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ರಾಹುಲ್ ಹೇಳಿದ್ದಾರೆ.