ಟಿ20 ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿಯನ್ನೂ ಮೀರಿದ ಕೆಎಲ್ ರಾಹುಲ್

ಮುಂಬೈ| Krishnaveni K| Last Modified ಭಾನುವಾರ, 12 ಜನವರಿ 2020 (09:23 IST)
ಮುಂಬೈ: ಟೀಂ ಇಂಡಿಯಾದಲ್ಲಿ ಆರಂಭಿಕರಾಗಿ ಅವಕಾಶ ಪಡೆದ ಮೇಲೆ ಅತ್ಯುತ್ತಮ ಆಟ ಪ್ರದರ್ಶಿಸುತ್ತಿರುವ ಕೆಎಲ್ ರಾಹುಲ್ ಈಗ ನಾಯಕ ಕೊಹ್ಲಿಯನ್ನೂ ಮೀರಿದ್ದಾರೆ.

 
ಐಸಿಸಿ ಬಿಡುಗಡೆಗೊಳಿಸಿರುವ ಟಿ20 ಕ್ರಿಕೆಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ರಾಹುಲ್, ವಿರಾಟ್ ಕೊಹ್ಲಿಯನ್ನೂ ಮೀರಿ ಆರನೇ ಸ್ಥಾನದಲ್ಲಿದ್ದಾರೆ. ವಿಂಡೀಸ್ ಮತ್ತು ಶ್ರೀಲಂಕಾ ವಿರುದ್ಧ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ರಾಹುಲ್ ಆರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.
 
ಆದರೆ ನಾಯಕ ಕೊಹ್ಲಿ ಒಂಭತ್ತನೇ ಸ್ಥಾನಕ್ಕೆ ಕುಸಿದಿದ್ದಾರೆ. ಈ ಎರಡೂ ಸರಣಿಗಳಲ್ಲಿ ಕೊಹ್ಲಿಗೆ ಬ್ಯಾಟಿಂಗ್ ಮಾಡಲು ಹೆಚ್ಚು ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಅವರು ಅಂಕದಲ್ಲಿ ಕುಸಿತ ಕಂಡಿದ್ದಾರೆ. ತಂಡಗಳ ಪಟ್ಟಿಯಲ್ಲಿ ಟೀಂ ಇಂಡಿಯಾ ಐದನೇ ಸ್ಥಾನದಲ್ಲಿದೆ.
ಇದರಲ್ಲಿ ಇನ್ನಷ್ಟು ಓದಿ :