ಕೊಲಂಬೊ(ಜು.31): ಭಾರತೀಯ ಕ್ರಿಕೆಟಿಗರಾದ ಕೃಷ್ಣಪ್ಪ ಗೌತಮ್ ಹಾಗೂ ಯಜುವೇಂದ್ರ ಚಹಲ್ಗೂ ಕೊರೋನಾ ಸೋಂಕು ತಗುಲಿದ್ದು, ಶ್ರೀಲಂಕಾದಲ್ಲೇ ಉಳಿದುಕೊಳ್ಳಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. ಕೃನಾಲ್ ಪಾಂಡ್ಯ ಸಹ ಇನ್ನೂ ಐಸೋಲೇಷನ್ನಲ್ಲೇ ಇದ್ದಾರೆ. ಉಳಿದ ಆಟಗಾರರು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದು, ಅಲ್ಲಿಂದ ನೇರವಾಗಿ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. * ಲಂಕಾ ಸರಣಿಯಲ್ಲಿ ಪಾಲ್ಗೊಂಡಿದ್ದ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೆ ಕೊರೋನಾ ಶಾಕ್ * ಕನ್ನಡಿಗ ಕೆ. ಗೌತಮ್ ಸೇರಿ ಇಬ್ಬರಿಗೆ ಕೋವಿಡ್ ಪಾಸಿಟಿವ್