ಮುಂಬೈ: ಧೋನಿ ನಾಯಕರಾಗಿದ್ದಾಗ ಟೀಂ ಇಂಡಿಯಾದ ಟ್ರಂಪ್ ಕಾರ್ಡ್ ಆಗಿದ್ದ ಸ್ಪಿನ್ನರ್ ಕುಲದೀಪ್ ಯಾದವ್ ಈಗ ತಂಡದಲ್ಲಿ ಸ್ಥಾನ ಪಡೆಯಲು ಹೆಣಗಾಡುತ್ತಿದ್ದಾರೆ. ಇಂಗ್ಲೆಂಡ್ ನಲ್ಲಿ ನಡೆಯಲಿರುವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಮತ್ತು ಟೆಸ್ಟ್ ಸರಣಿಗೆ ಕುಲದೀಪ್ ಯಾದವ್ ತಂಡದಲ್ಲಿ ಸ್ಥಾನ ಪಡೆದುಕೊಂಡಿಲ್ಲ. ಈ ಬಗ್ಗೆ ಅವರೀಗ ಬೇಸರ ಹೊರಹಾಕಿದ್ದಾರೆ.‘ಭಾರತೀಯ ತಂಡದಲ್ಲಿ ಅವಕಾಶ ಸಿಗದಿರುವುದು ಬೇಸರ ತಂದಿದೆ. ಪ್ರತಿಬಾರಿಯೂ ತಂಡದಲ್ಲಿ ಅವಕಾಶ ಸಿಕ್ಕಾಗ ಗೆಲುವಿಗಾಗಿ ಶ್ರಮಿಸುತ್ತಿದ್ದೆ. ಇದೆಲ್ಲಾ ವೃತ್ತಿಜೀವನದ ಭಾಗ.