ಚೆನ್ನೈ: ಇಂಗ್ಲೆಂಡ್ ವಿರುದ್ಧ ಫೆಬ್ರವರಿ 5 ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ಆರಂಭಿಕರಾಗಿ ಕನ್ನಡಿಗ ಮಯಾಂಕ್ ಅಗರ್ವಾಲ್ ಗೆ ಸ್ಥಾನ ಸಿಗುವುದು ಅನುಮಾನವಾಗಿದೆ. ಆಸ್ಟ್ರೇಲಿಯಾ ಸರಣಿಯಲ್ಲಿ ರೋಹಿತ್ ಶರ್ಮಾ ಜೊತೆಗೆ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಯುವ ಬ್ಯಾಟ್ಸ್ ಮನ್ ಶಬ್ನಂ ಗಿಲ್ ಅತ್ಯುತ್ತಮ ನಿರ್ವಹಣೆ ತೋರಿದ್ದರು. ಹೀಗಾಗಿ ಅವರನ್ನೇ ಈ ಸರಣಿಯಲ್ಲೂ ಆರಂಭಿಕರಾಗಿ ಮುಂದುವರಿಸುವ ಸಾಧ್ಯತೆಯಿದೆ. ಇನ್ನು, ವಿರಾಟ್ ಕೊಹ್ಲಿ ಕೂಡಾ ತಂಡಕ್ಕೆ ವಾಪಸಾಗಿರುವುದರಿಂದ ಮಯಾಂಕ್