ಮುಂಬೈ: ಸೀಮಿತ ಓವರ್ ಗಳ ಪಂದ್ಯದ ನಾಯಕತ್ವಕ್ಕೆ ಎಂಎಸ್ ಧೋನಿ ಸರಿಯಾದ ಸಮಯಕ್ಕೇ ನಿವೃತ್ತಿ ಹೇಳಿದ್ದಾರೆ. ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಎಲ್ಲಾ ಮಾದರಿಯ ಪಂದ್ಯಗಳಿಗೆ ನಾಯಕರಾಗಲು ಸಿದ್ಧರಾಗಿದ್ದಾರೆ ಎಂದು ಟೀಂ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಹೇಳಿದ್ದಾರೆ.ಅಲ್ಲಿದೆ ಇಂದು ನಡೆಯಲಿರುವ ಆಯ್ಕೆ ಸಮಿತಿ ಸಭೆಯಲ್ಲಿ ವಿರಾಟ್ ಕೊಹ್ಲಿಗೆ ಪಟ್ಟಾಭಿಷೇಕ ಮಾಡುವುದು ಪಕ್ಕಾ ಆಗಿದೆ. ಇಂದು ಇಂಗ್ಲೆಂಡ್ ಸರಣಿಗೆ ಭಾರತ ತಂಡದ ಆಯ್ಕೆ ನಡೆಯಲಿದೆ.