ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಆಡುವ ಬಳಗದಿಂದ ಕೆಎಲ್ ರಾಹುಲ್ ರಂತಹ ಅನುಭವಿ ಆಟಗಾರರನ್ನು ಕೈ ಬಿಟ್ಟಿದ್ದಕ್ಕೆ ಟೀಂ ಇಂಡಿಯಾ ವಿರುದ್ಧ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ರಾಹುಲ್ ಗೆ ಅವಕಾಶ ನೀಡಬಹುದು ಎಂದೇ ಎಲ್ಲರೂ ಲೆಕ್ಕಾಚಾರ ಹಾಕಿದ್ದರು. ಆದರೆ ರವೀಂದ್ರ ಜಡೇಜಾರನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ. ಹನುಮ ವಿಹಾರಿ ಅಥವಾ ಸ್ವತಃ ನಾಯಕ ಅಜಿಂಕ್ಯಾ ರೆಹಾನೆಗಿಂತ ರಾಹುಲ್ ಉತ್ತಮ