ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಯಜುವೇಂದ್ರ ಚಾಹಲ್ ಮತ್ತು ಧನಶ್ರೀ ವರ್ಮಾ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ವೈರಲ್ ಆಗುತ್ತಿದ್ದಂತೇ ನೆಟ್ಟಿಗರು ಧನಶ್ರೀಯನ್ನು ಟ್ರೋಲ್ ಮಾಡಿದ್ದಾರೆ.ಚಾಹಲ್ 2020 ರಲ್ಲಿ ಯೂ ಟ್ಯೂಬರ್, ಕೊರಿಯಾಗ್ರಫರ್ ಧನಶ್ರೀ ವರ್ಮಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಪರಸ್ಪರ ಪ್ರೀತಿಸಿ ಇಬ್ಬರೂ ಮದುವೆಯಾಗಿದ್ದರು. ನಿನ್ನೆ ಇದ್ದಕ್ಕಿದ್ದಂತೆ ಅವರ ದಾಂಪತ್ಯದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿ ವೈರಲ್ ಆಗಿತ್ತು. ಕೊನೆಗೆ ಇಬ್ಬರೂ ಸಾಮಾಜಿಕ ಜಾಲತಾಣದ ಮೂಲಕ