ಹೈದರಾಬಾದ್: ವಿರಾಟ್ ಕೊಹ್ಲಿ ಮಾಡುತ್ತಿರುವ ದಾಖಲೆ ನೋಡಿ ಅದೆಷ್ಟೋ ಮಂದಿ ಅವರನ್ನು ಸಚಿನ್ ತೆಂಡುಲ್ಕರ್ ಗೆ ಹೋಲಿಸುತ್ತಾರೆ. ಆದರೆ ಇದು ಸರಿಯಲ್ಲ ಎಂದು ಟೀಂ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಹೇಳಿಕೊಂಡಿದ್ದಾರೆ. ಇಬ್ಬರೂ ಅತ್ಯುತ್ತಮ ಬ್ಯಾಟ್ಸ್ ಮನ್ ಗಳೇ. ಆದರೆ ಸಚಿನ್ ಸ್ಥಾನವನ್ನು ಯಾರೂ ತುಂಬಲು ಸಾಧ್ಯವಿಲ್ಲ. ಹೀಗಾಗಿ ಇವರಿಬ್ಬರ ನಡುವೆ ಹೋಲಿಕೆ ಮಾಡುವುದು ನ್ಯಾಯವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ಕೊಹ್ಲಿ ಮೂರೂ ಮಾದರಿಯ ಕ್ರಿಕೆಟ್ ನಲ್ಲಿ ರನ್ ಮೆಶಿನ್