ಕೇಪ್ ಟೌನ್: ಟೀಂ ಇಂಡಿಯಾ ವಿರುದ್ಧ ನಾಲ್ಕನೇ ಏಕದಿನ ಪಂದ್ಯದಲ್ಲಿ ದ.ಆಫ್ರಿಕಾ ಕ್ರಿಕೆಟಿಗ ಇಮ್ರಾನ್ ತಾಹಿರ್ ಮೇಲೆ ಜನಾಂಗೀಯ ನಿಂದನೆ ನಡೆದಿದೆ ಎಂದು ದ.ಆಫ್ರಿಕಾ ಕ್ರಿಕೆಟ್ ಮಂಡಳಿ ಖಚಿತಪಡಿಸಿದೆ. ಅಷ್ಟಕ್ಕೂ ತಾಹಿರ್ ಮೇಲೆ ಜನಾಂಗೀಯ ನಿಂದನೆ ನಡೆಸಿದವರಾರು ಯಾರು? ಕ್ರಿಕೆಟಿಗರಂತೂ ಅಲ್ಲ. ಪ್ರೇಕ್ಷಕರ ಸಾಲಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ತಾಹಿರ್ ರನ್ನು ಜನಾಂಗೀಯವಾಗಿ ನಿಂದಿಸಿದ್ದನೆಂಬುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ವತಃ ತಾಹಿರ್ ಭದ್ರತಾ ಅಧಿಕಾರಿಗಳಿಗೆ ದೂರು ನೀಡಿದ್ದ ಹಿನ್ನಲೆಯಲ್ಲಿ