ಲಂಡನ್: ತಮ್ಮದೇ ಗರಡಿಯಲ್ಲಿ ಪಳಗಿದ ಯುವ ಬ್ಯಾಟ್ಸ್ ಮನ್ ರಿಷಬ್ ಪಂತ್ ಇದೀಗ ಟೀಂ ಇಂಡಿಯಾಗೆ ಆಯ್ಕೆಯಾಗಿರುವುದಕ್ಕೆ ಗುರು ರಾಹುಲ್ ದ್ರಾವಿಡ್ ಸಂತಸ ವ್ಯಕ್ತಪಡಿಸಿದ್ದಾರೆ.ರಿಷಬ್ ಟೆಸ್ಟ್ ಕ್ರಿಕೆಟ್ ನಲ್ಲಿ ಏನು ಮಾಡಲು ಸಾಧ್ಯ ಎಂದು ಅನುಮಾನ ಪಡುತ್ತಿರುವವರಿಗೆ ದ್ರಾವಿಡ್ ಸರಿಯಾಗಿಯೇ ಉತ್ತರ ಕೊಟ್ಟಿದ್ದಾರೆ. ಆತನಲ್ಲಿ ಟೆಸ್ಟ್ ಕ್ರಿಕೆಟ್ ಆಡುವ ಸಾಮರ್ಥ್ಯ, ತಾಳ್ಮೆ ಎರಡೂ ಇದೆ ಎಂದು ದ್ರಾವಿಡ್ ಹೇಳಿದ್ದಾರೆ.ಭಾರತ ಎ ತಂಡ ಇಂಗ್ಲೆಂಡ್ ಪ್ರವಾಸ ಮಾಡಿದ್ದಾಗ ರಿಷಬ್ ಚೆನ್ನಾಗಿಯೇ ಆಡಿದ್ದರು.