ಲಂಡನ್: ವಿಶ್ವಕಪ್ ಕ್ರಿಕೆಟ್ 2019 ರಲ್ಲಿ ಭರ್ಜರಿ ಫಾರ್ಮ್ ಪ್ರದರ್ಶಿಸುತ್ತಿರುವ ಟೀಂ ಇಂಡಿಯಾ ಆರಂಭಿಕ ರೋಹಿತ್ ಶರ್ಮಾಗೆ ಇಂದಿನ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಮೂರು ವಿಶ್ವದಾಖಲೆ ಮಾಡುವ ಅವಕಾಶ ಎದುರಾಗಿದೆ. ಈಗಾಗಲೇ ವಿಶ್ವಕಪ್ ನಲ್ಲಿ ಒಟ್ಟು 5 ಶತಕಗಳೊಂದಿಗೆ ಗರಿಷ್ಠ ವಿಶ್ವಕಪ್ ಶತಕಧಾರಿಗಳ ಪಟ್ಟಿಯಲ್ಲಿ ಜಾಗತಿಕವಾಗಿ ದ್ವಿತೀಯ ಸ್ಥಾನದಲ್ಲಿರುವ ರೋಹಿತ್ ಇಂದು ಶತಕ ಗಳಿಸಿದರೆ ಸಚಿನ್ ದಾಖಲೆ ಸರಿಗಟ್ಟಲಿದ್ದಾರೆ. ಅಷ್ಟೇ ಅಲ್ಲದೆ, ಒಂದೇ ವಿಶ್ವಕಪ್ ನಲ್ಲಿ ಅತ್ಯಧಿಕ ಶತಕ ಗಳಿಸಿದ