ಮುಂಬೈ: ಟೀಂ ಇಂಡಿಯಾ ಹಿಟ್ ಮ್ಯಾನ್ ರೋಹಿತ್ ಶರ್ಮಾಗೆ ಇಂದು ಫಿಟ್ನೆಸ್ ಪರೀಕ್ಷೆ ನಡೆಯಲಿದ್ದು, ಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡುತ್ತಾರಾ ಎಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ. ಇಂದಿನ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸಾದರೆ ಮಾತ್ರ ರೋಹಿತ್ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ತಂಡಕ್ಕೆ ಮರಳುವುದು ಟೀಂ ಇಂಡಿಯಾ ಪಾಲಿಗೆ ಮಹತ್ವದ್ದಾಗಿದೆ. ಈಗಾಗಲೇ ಸೀಮಿತ ಓವರ್ ಗಳ ಸರಣಿಯಲ್ಲೂ ರೋಹಿತ್ ರನ್ನು