ಮುಂಬೈ|
Krishnaveni K|
Last Modified ಬುಧವಾರ, 25 ನವೆಂಬರ್ 2020 (09:41 IST)
ಮುಂಬೈ: ಟೆಸ್ಟ್ ಸರಣಿಯಲ್ಲಾದರೂ ರೋಹಿತ್ ಶರ್ಮಾರ ಆಟ ನೋಡಬಹುದು ಎಂದು ಕಾದಿದ್ದ ಅಭಿಮಾನಿಗಳಿಗೆ ನಿರಾಸೆಯ ಸುದ್ದಿ ಕಾದಿದೆ.
ಗಾಯಗೊಂಡು ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿರುವ ರೋಹಿತ್ ಶರ್ಮಾ ಮತ್ತು ಇಶಾಂತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಈಗಿನ ಪರಿಸ್ಥಿತಿ ಗಮನಿಸಿದರೆ ಅವರು ಎಲ್ಲಾ ಪಂದ್ಯಗಳಿಂದಲೂ ಹೊರಗುಳಿಯುವ ಸಾಧ್ಯತೆಯೇ ಹೆಚ್ಚು ಎನ್ನಲಾಗಿದೆ. ಹೀಗಾಗಿ ಕೊಹ್ಲಿ ಅನುಪಸ್ಥಿತಿಯಲ್ಲಿ ಭಾರತಕ್ಕೆ ರೋಹಿತ್ ಆಸರೆಯಾದರೂ ಸಿಗಬಹುದು ಎಂಬ ಅಭಿಮಾನಿಗಳ ನಿರೀಕ್ಷೆ ಸುಳ್ಳಾಗಿದೆ.