ಮುಂಬೈ: ಸತತ ಕ್ರಿಕೆಟ್ ನಿಂದ ಬಳಲಿರುವ ಟೀಂ ಇಂಡಿಯಾ ಆರಂಭಿಕ ರೋಹಿತ್ ಶರ್ಮಾಗೆ ಮುಂಬರುವ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾ ಆಯ್ಕೆ ಮಾಡಲಾಗಿದ್ದು, ರೋಹಿತ್ ಶರ್ಮಾಗೆ ಲಂಕಾ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಆದರೆ ಆಸೀಸ್ ಸರಣಿಗೆ ರೋಹಿತ್ ಆಯ್ಕೆಯಾಗಿದ್ದಾರೆ. ಇನ್ನು ಗಾಯದಿಂದಾಗಿ ಹಲವು ದಿನಗಳಿಂದ ಕ್ರಿಕೆಟ್ ನಿಂದ ಹೊರಗುಳಿದಿದ್ದ ವೇಗಿ ಜಸ್ಪ್ರೀತ್ ಬುಮ್ರಾ ಕೂಡಾ ತಂಡಕ್ಕೆ ವಾಪಸ್ ಆಗಿದ್ದಾರೆ.ಜನವರಿ