ಬೆಂಗಳೂರು: ಐಪಿಎಲ್ ವೇಳೆ ತೂಕ ಹೆಚ್ಚಿಸಿಕೊಂಡಂತೆ ಕಾಣುತ್ತಿದ್ದ ರೋಹಿತ್ ಶರ್ಮಾ ಆಸ್ಟ್ರೇಲಿಯಾ ಸರಣಿಗೆ ಮೊದಲು ಫಿಟ್ ಆಗಲು ತೂಕ ಇಳಿಸಿಕೊಳ್ಳಲು ಕಠಿಣ ಪರಿಶ್ರಮಪಟ್ಟಿದ್ದಾರೆ.ಬೆಂಗಳೂರಿನ ಎನ್ ಸಿಎಯಲ್ಲಿ ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳಲು ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ರೋಹಿತ್ ಗೆ ತೂಕ ಇಳಿಸಿಕೊಳ್ಳಲು ಕಠಿಣ ವರ್ಕೌಟ್ ನೀಡಲಾಗಿತ್ತು. ಟೀಂ ಇಂಡಿಯಾದಲ್ಲಿ ಫಿಟ್ನೆಸ್ ಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತದೆ. ಈ ಮೊದಲು ರಿಷಬ್ ಪಂತ್ ಕೂಡಾ ಅತಿಯಾದ ತೂಕದಿಂದ ಟೀಂ ಇಂಡಿಯಾದಿಂದ ಸ್ಥಾನ ಕಳೆದುಕೊಳ್ಳುವ