ಮುಂಬೈ: ಟೀಂ ಇಂಡಿಯಾ ಆರಂಭಿಕ ರೋಹಿತ್ ಶರ್ಮಾ ಆಧುನಿಕ ಕ್ರಿಕೆಟ್ ಜಗತ್ತಿನ ಟಾಪ್ ಕ್ರಿಕೆಟಿಗ ಎನ್ನುವುದರಲ್ಲಿ ಎರಡು ಮಾತಿಲ್ಲ. ಇಂತಿಪ್ಪ ರೋಹಿತ್ ತಾನು ಯಾವಾಗ ನಿವೃತ್ತಿಯಾಗುವುದು ಎಂಬುದನ್ನು ಬಹಿರಂಗಪಡಿಸಿದ್ದಾರೆ.ಇನ್ ಸ್ಟಾಗ್ರಾಂ ಲೈವ್ ಚ್ಯಾಟ್ ನಲ್ಲಿ ರೋಹಿತ್ ತಾವು 38-39 ವರ್ಷಕ್ಕೆ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ. ಈಗ ರೋಹಿತ್ ಗೆ 33 ವರ್ಷ ವಯಸ್ಸು. ಅಂದರೆ ಇನ್ನೂ ಐದು ವರ್ಷ ಕ್ರಿಕೆಟ್ ಆಡುವುದಾಗಿ ಹೇಳಿದ್ದಾರೆ.2007 ರಲ್ಲಿ ರೋಹಿತ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ