ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿರುವ ಟಿ20 ಸರಣಿಯಲ್ಲಿ ಹಂಗಾಮಿ ನಾಯಕ ರೋಹಿತ್ ಶರ್ಮಾ, ಖಾಯಂ ನಾಯಕ ವಿರಾಟ್ ಕೊಹ್ಲಿಯ ದಾಖಲೆಯೊಂದನ್ನು ಹಿಂದಿಕ್ಕಲಿದ್ದಾರೆ.ನಾಳೆಯಿಂದ ಟಿ20 ಸರಣಿಯ ಮೊದಲ ಪಂದ್ಯ ಆರಂಭವಾಗಲಿದ್ದು, ರೋಹಿತ್ ಟಿ20 ಪಂದ್ಯಗಳಲ್ಲಿ ಅತೀ ಹೆಚ್ಚು ಗೆಲುವು ದಾಖಲಿಸಿದ ನಾಯಕ ಎಂಬ ಕೊಹ್ಲಿ ದಾಖಲೆಯನ್ನು ಹಿಂದಿಕ್ಕುವ ಅವಕಾಶ ಪಡೆದಿದ್ದಾರೆ.ರೋಹಿತ್ ಇದುವರೆಗೆ 12 ಪಂದ್ಯಗಳಲ್ಲಿ ಭಾರತವನ್ನು ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ಪೈಕಿ 11 ರಲ್ಲಿ ಗೆಲುವು ಪಡೆದಿದ್ದಾರೆ.