ನವದೆಹಲಿ: ಕಂಬಳ ಎಂಬ ಕರಾವಳಿಯ ಗ್ರಾಮೀಣ ಕ್ರೀಡೆಗೆ ಕಾನೂನಿನ ಮಾನ್ಯತೆ ನೀಡುವ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕುತ್ತಿರುವ ಬಗ್ಗೆ ಖುಷಿ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಗೆ ಮಂಗಳೂರಿಗರು ಅಭಿನಂದಿಸಿದ್ದಾರೆ. ಅಷ್ಟೇ ಅಲ್ಲ, ತಮ್ಮ ಊರಿಗೆ ಬರುವಂತೆ ಆಹ್ವಾನವನ್ನೂ ನೀಡಿದ್ದಾರೆ. ಸೆಹ್ವಾಗ್ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಕೆಲವರು ಕರಾವಳಿ ಅಭಿಮಾನಿಗಳು, ನಿಮ್ಮ ಬೆಂಬಲಕ್ಕೆ ಧನ್ಯವಾದಗಳು. ಒಮ್ಮೆ ಮಂಗಳೂರಿಗೆ ಬಂದು ಕಂಬಳ ಕ್ರೀಡೆಯನ್ನು ವೀಕ್ಷಿಸಿ. ಇದು