ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿ ಆಗಾಗ ಭಾರತ ವಿರೋಧಿ ಕಾಮೆಂಟ್ ನಿಂದ ಟೀಕೆಗೊಳಗಾಗುತ್ತಾರೆ. ಆದರೆ ಇದೀಗ ಹಿಂದೂ ದೇವಾಲಯಕ್ಕೆ ತೆರಳಿ ಅಲ್ಲಿನ ಜನರಿಗೆ ಅಗತ್ಯ ವಸ್ತುಗಳನ್ನು ವಿತರಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.