ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಪಿನ್ನರ್ ಕುಲದೀಪ್ ಯಾದವ್ ಆಸ್ಟ್ರೇಲಿಯಾದ ಪ್ರಮುಖ ವಿಕೆಟ್ ಕಿತ್ತು ಗಮನಸೆಳೆದಿದ್ದರು.ಕುಲದೀಪ್ ಯಾದವ್ ಸ್ಪಿನ್ ಮೋಡಿಗೆ ಆಸೀಸ್ ನಾಯಕ ಟಿಮ್ ಪೇಯ್ನ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜರಂತಹ ಪ್ರಮುಖ ಬ್ಯಾಟ್ಸ್ ಮನ್ ಗಳು ಔಟಾಗಿ ಪೆವಿಲಿಯನ್ ಸೇರಿಕೊಂಡಿದ್ದರು. ಇದರ ಹಿಂದಿನ ರಹಸ್ಯವನ್ನು ದಿನದಾಟದ ನಂತರ ಕಾಮೆಂಟೇಟರ್ ಮುರಳಿ ಕಾರ್ತಿಕ್ ಬಹಿರಂಗಪಡಿಸಿದ್ದಾರೆ.ಅಡಿಲೇಡ್ ನಲ್ಲಿ ಮೊದಲ ಟೆಸ್ಟ್ ಮುಗಿದ