Widgets Magazine

ವಿಶ್ವಕಪ್ 2019: ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಗೆ ಗಾಯ

ಲಂಡನ್| Krishnaveni K| Last Modified ಮಂಗಳವಾರ, 11 ಜೂನ್ 2019 (10:38 IST)
ಲಂಡನ್: ವಿಶ್ವಕಪ್ ನಲ್ಲಿ ಎರಡು ಪಂದ್ಯಗಳನ್ನು ಆಡಿ ಎರಡರಲ್ಲೂ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಶಿಖರ್ ಧವನ್ ರೂಪದಲ್ಲಿ ಆತಂಕಕಾರಿ ವಿಷಯ ಬಂದಿದೆ.

 
ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶತಕ ಗಳಿಸಿ ಭಾರತದ ಗೆಲುವಿನ ರೂವಾರಿಯಾಗಿದ್ದ ಧವನ್ ಬೆರಳಿನ ಗಾಯಕ್ಕೆ ತುತ್ತಾಗಿದ್ದು, ಇಂದು ಸ್ಕ್ಯಾನಿಂಗ್ ಮಾಡಿಸಿಕೊಳ್ಳಲಿದ್ದಾರೆ.
 
ಆಸೀಸ್ ವಿರುದ್ಧದ ಪಂದ್ಯದಲ್ಲಿ ನಥನ್ ನಿಲೆ ಬೌಲಿಂಗ್ ಎದುರಿಸುವಾಗ ಬೆರಳಿಗೆ ಗಾಯ ಮಾಡಿಕೊಂಡಿದ್ದ ಧವನ್ ನೋವಿನಲ್ಲಿಯೂ ಶತಕ ಗಳಿಸಿ ಮಿಂಚಿದ್ದರು. ಇದೀಗ ಗುರುವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಮೊದಲು ಫಿಟ್ ಆಗಲು ಧವನ್ ವೈದ್ಯಕೀಯ ಪರೀಕ್ಷೆಗೊಳಪಡಲಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :