ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಕ್ರಮಣಕಾರಿ ಆಟಕ್ಕೆ ಹೆಸರು. ಅವರು ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ ನಲ್ಲಿ ಒಂದಾದ ಮೇಲೊಂದರಂತೆ ಗೆಲ್ಲುವುದನ್ನು ನೋಡಿ ಕ್ರಿಕೆಟ್ ಜಗತ್ತೇ ಅವರನ್ನು ಕೊಂಡಾಡುತ್ತಿದೆ.ಈ ನಡುವೆ ಪಾಕಿಸ್ತಾನದ ಮಾಜಿ ವೇಗಿ ಶೊಯೇಬ್ ಅಖ್ತರ್ ವಿರಾಟ್ ಕೊಹ್ಲಿಯನ್ನು ಹೊಗಳುತ್ತಾ ಅವರ ಆಕ್ರಮಣಕಾರಿ ಸ್ವಭಾವವನ್ನು ಪಾಕ್ ನ ಮಾಜಿ ದಿಗ್ಗಜ ಕ್ರಿಕೆಟಿಗರಿಗೆ ಹೋಲಿಸಿದ್ದಾರೆ.ಸಂದರ್ಶನವೊಂದರಲ್ಲಿ ಕೊಹ್ಲಿ ನಾಯಕತ್ವವನ್ನು ಹೊಗಳಿರುವ ಅಖ್ತರ್ ವಿರಾಟ್ ನೋಡಿದರೆ ಪಾಕಿಸ್ತಾನದ ದಿಗ್ಗಜ ಕ್ರಿಕೆಟಿಗರನ್ನು ನೆನಪಾಗುತ್ತದೆ.