Widgets Magazine

ಕೊರೋನಾ ಭೀತಿಯಲ್ಲಿ ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧನಾ

ಮುಂಬೈ| Krishnaveni K| Last Modified ಬುಧವಾರ, 1 ಏಪ್ರಿಲ್ 2020 (09:48 IST)
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧನಾ ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್ ಅವಧಿಯಲ್ಲಿದ್ದಾರೆ.

 
ಮುಂಬೈನಿಂದ ಸಾಂಗ್ಲಿಗೆ ಪ್ರಯಾಣ ಬೆಳೆಸಿದ್ದ ಸ್ಮೃತಿಗೆ ಕೊರೋನಾ ಭೀತಿ ಕಾಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಾಂಗ್ಲಿ ಮಹಾನಗರ ಪಾಲಿಕೆ ಮುಖ್ಯ ಆರೋಗ್ಯಾಧಿಕಾರಿ ಡಾ. ರವೀಂದ್ರ ಮುನ್ನೆಚ್ಚರಿಕೆ ದೃಷ್ಟಿಯಿಂದ ಸ್ಮೃತಿಗೆ ಕ್ವಾರಂಟೈನ್ ಅವಧಿಯಲ್ಲಿರಲು ಸಲಹೆ ನೀಡಲಾಗಿದೆ ಎಂದಿದ್ದಾರೆ.
 
ಪ್ರತಿನಿತ್ಯವೂ ಅವರ ಅರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ತೀವ್ರ ನಿಗಾ ವಹಿಸಲಾಗುತ್ತಿದೆ ಎಂದು ವೈದ್ಯರು ಹೇಳಿದ್ದಾರೆ. ಈ ಮೊದಲು ಬಾಕ್ಸರ್ ಮೇರಿ ಕೋಮ್ ಕೂಡಾ 14 ದಿನಗಳ ಸಾಮಾಜಿಕ ಅಂತರ ಕಾಯ್ದುಕೊಂಡು ನಿಗಾ ವಹಿಸಿದ್ದರು.
ಇದರಲ್ಲಿ ಇನ್ನಷ್ಟು ಓದಿ :