ಮುಂಬೈ: ಹಗಲು-ರಾತ್ರಿ ಟೆಸ್ಟ್ ಪಂದ್ಯ ಆಯೋಜಿಸುವ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಗಂಭೀರ ಚಿಂತನೆ ನಡೆಸಿದ್ದು, ಈ ಬಗ್ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆಗೂ ಚರ್ಚಿಸಿದ್ದಾರೆ.ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಗಂಗೂಲಿ ಕೊಹ್ಲಿಗೂ ಹಗಲು-ರಾತ್ರಿ ಟೆಸ್ಟ್ ಪಂದ್ಯ ಆಯೋಜಿಸುವ ಬಗ್ಗೆ ಒಲವಿದೆ ಎಂದಿದ್ದಾರೆ. ನಾಯಕ ಇದಕ್ಕೆ ಒಪ್ಪಿದರೆ ನಮ್ಮ ಕೆಲಸ ಸುಗಮವಾಗುತ್ತದೆ. ನಾನು ಅಧ್ಯಕ್ಷನಾಗಿರುವವರೆಗೂ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಪ್ರೋತ್ಸಾಹ ನೀಡುವುದಾಗಿ ಗಂಗೂಲಿ ಹೇಳಿದ್ದಾರೆ.ಮೂಲಗಳ ಪ್ರಕಾರ