ನವದೆಹಲಿ: ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವ ಕಾರ್ಯಕ್ರಮಕ್ಕೆ ಆಹ್ವಾನ ಬಂದಿದ್ದರೂ ಹೋಗುವುದಿಲ್ಲ ಎಂದು ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಹೇಳಿದ್ದಾರೆ. ಇಮ್ರಾನ್ ಪದಗ್ರಹಣ ಸಮಾರಂಭಕ್ಕೆ ಗವಾಸ್ಕರ್ ಸೇರಿದಂತೆ ಕಪಿಲ್ ದೇವ್, ನವಜೋತ್ ಸಿಂಗ್ ಸಿಧು ಮುಂತಾದವರಿಗೆ ಆಹ್ವಾನ ಬಂದಿತ್ತು. ಆದರೆ ಈ ಮೊದಲು ಗವಾಸ್ಕರ್ ಕೇಂದ್ರ ಸರ್ಕಾರದ ಸಲಹೆ ಕೇಳಬೇಕಷ್ಟೇ ಎಂದಿದ್ದರು.ಇದೀಗ ತಾವು ಪದಗ್ರಹಣಕ್ಕೆ ಸಮಾರಂಭಕ್ಕೆ ಹೋಗುವುದಿಲ್ಲ ಎಂದಿದ್ದಾರೆ. ಭಾರತ