ಬೆಂಗಳೂರು: ವಿಶ್ವದಲ್ಲಿ ಗ್ರೇಟ್ ವಾಲ್ ಆಫ್ ಚೀನಾ ಬಿಟ್ಟರೆ, ಅಷ್ಟೊಂದು ಗಟ್ಟಿ ಗೋಡೆ ಎಂದರೆ ಇರುವುದು ಕ್ರಿಕೆಟ್ ನಲ್ಲಿ. ಅದೂ ರಾಹುಲ್ ದ್ರಾವಿಡ್ ರೂಪದಲ್ಲಿ ಎಂದು ಹಿಂದೊಮ್ಮೆ ವೀರೇಂದ್ರ ಸೆಹ್ವಾಗ್ ಹೇಳಿಕೊಂಡಿದ್ದರು. ಮೊನ್ನೆ ದ.ಆಫ್ರಿಕಾದಲ್ಲಿ ಟೀಂ ಇಂಡಿಯಾ ಪರದಾಡುವಾಗ ದ್ರಾವಿಡ್ ಮತ್ತೆ ನೆನಪಾದರು. ಕಾಮೆಂಟರಿಯಲ್ಲಿ ರಾಹುಲ್ ದ್ರಾವಿಡ್ ಹೊರತುಪಡಿಸಿ ಎಲ್ಲರೂ, ಎಲ್ಲಾ ಸಂದರ್ಭದಲ್ಲೂ ರಕ್ಷಣಾತ್ಮಕ ಆಟವಾಡಿದರೆ ಪ್ರಯೋಜನವಾಗದು ಎನ್ನುವುದು ಕಿವಿಗೆ ಬಿತ್ತು. ಅದು ನಿಜವೇ ದ್ರಾವಿಡ್ ರಂತೆ ಎದುರಾಳಿಗಳನ್ನು