ನವದೆಹಲಿ: ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಟಿ20 ವಿಶ್ವಕಪ್ ಪಂದ್ಯದಲ್ಲಿ ಸೋತ ಬಳಿಕ ವಿರಾಟ್ ಕೊಹ್ಲಿ ಪುತ್ರಿ ವಮಿಕಾ ಕೊಹ್ಲಿಗೆ ಅತ್ಯಾಚಾರ ಬೆದರಿಕೆ ಹಾಕಿದ ಟೆಕಿಯನ್ನು ಪೊಲೀಸರು ಬಂಧಿಸಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಪುಟಾಣಿ ವಮಿಕಾ ಕೊಹ್ಲಿಗೆ ವ್ಯಕ್ತಿಯೋರ್ವ ಅತ್ಯಾಚಾರ ಬೆದರಿಕೆ ಹಾಕಿದ್ದು ಭಾರೀ ಸುದ್ದಿಯಾಗಿತ್ತು. ಈ ನೆಟ್ಟಿಗನ ಕೀಳು ಅಭಿರುಚಿಯ ಪೋಸ್ಟ್ ಬಗ್ಗೆ ಸ್ವತಃ ದೆಹಲಿ ಮಹಿಳಾ ಆಯೋಗ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿತ್ತು.ಅದರಂತೆ ಮುಂಬೈ ಪೊಲೀಸರು ಈಗ ಹೈದರಾಬಾದ್