ತಂದೆಯಾದ ಖುಷಿಹಂಚಿಕೊಂಡ ವಿರಾಟ್ ಕೊಹ್ಲಿ

ಮುಂಬೈ| Krishnaveni K| Last Modified ಸೋಮವಾರ, 11 ಜನವರಿ 2021 (16:49 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂದೆಯಾದ ಖುಷಿ ಹಂಚಿಕೊಂಡಿದ್ದಾರೆ. ಅನುಷ್ಕಾ ಇಂದು ಮಧ‍್ಯಾಹ್ನ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆಂದು ವಿರಾಟ್ ಟ್ವೀಟ್ ಮಾಡಿದ್ದಾರೆ.
 

‘ನಮಗೆ ಹೆಣ್ಣು ಮಗುವಾಗಿದೆ ಎಂಬ ವಿಚಾರವನ್ನು ಹೇಳಿಕೊಳ್ಳಲು ಖುಷಿಯಾಗುತ್ತಿದೆ. ನಿಮ್ಮ ಪ್ರೀತಿ, ಹಾರೈಕೆಗಳಿಗೆ ಧನ್ಯವಾದಗಳು. ಅನುಷ್ಕಾ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.  ನಮ್ಮ ಜೀವನದ ಈ ಹೊಸ ಅಧ್ಯಾಯ ಆರಂಭಿಸುವ ನಮ್ಮ ಖುಷಿಗೆ ಪದಗಳೇ ಇಲ್ಲ. ಈ ಸಂದರ್ಭದಲ್ಲಿ ನಮ್ಮ ಖಾಸಗಿತನವನ್ನು ನೀವು ಗೌರವಿಸುತ್ತೀರಿ ಎಂದು ನಂಬಿದ್ದೇನೆ’ ಎಂದು ವಿರಾಟ್ ಸಾಮಾಜಿಕ ಜಾಲತಾಣದಲ್ಲಿ ಖುಷಿಯ ಸಮಾಚಾರವನ್ನು ಹಂಚಿಕೊಂಡಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :