Widgets Magazine

ಇನ್ ಸ್ಟಾಗ್ರಾಂನಲ್ಲಿ ಹೊಸ ದಾಖಲೆ ಮಾಡಿದ ವಿರಾಟ್ ಕೊಹ್ಲಿ

ಮುಂಬೈ| Krishnaveni K| Last Modified ಮಂಗಳವಾರ, 18 ಫೆಬ್ರವರಿ 2020 (10:22 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರತೀ ಪಂದ್ಯದಲ್ಲೂ ದಾಖಲೆಗಳ ಮೇಲೆ ದಾಖಲೆ ಮಾಡುತ್ತಿರುತ್ತಾರೆ. ಆದರೆ ಈ ಬಾರಿ ಸೋಷಿಯಲ್ ಮೀಡಿಯಾದಲ್ಲಿ ದಾಖಲೆ ಮಾಡಿದ್ದಾರೆ.
 

ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ವಿರಾಟ್ ಕೊಹ್ಲಿ ಈಗ ಇನ್ ಸ್ಟಾಗ್ರಾಂನಲ್ಲಿ ಅತೀ ಹೆಚ್ಚು ಫಾಲೋವರ್ ಗಳನ್ನು ಹೊಂದಿದ ಸೆಲೆಬ್ರಿಟಿಗಳ ಪೈಕಿ ಭಾರತೀಯ ತಾರೆಯರ ಪೈಕಿ ನಂ.1 ಆಗಿದ್ದಾರೆ. ಇದುವರೆಗೆ ಒಟ್ಟು 930 ಪೋಸ್ಟ್ ಮಾಡಿರುವ ಕೊಹ್ಲಿ 50 ಮಿಲಿಯನ್ ಫಾಲೋವರ್ ಗಳನ್ನು ಹೊಂದಿದ್ದಾರೆ.
 
ಆ ಮೂಲಕ ಭಾರತೀಯ ಸೆಲೆಬ್ರಿಟಿಗಳ ಪೈಕಿ ನಂ.1 ಆಗಿದ್ದಾರೆ. 49.9 ಮಿಲಿಯನ್ ಫಾಲೋವರ್ ಗಳನ್ನು ಹೊಂದಿರುವ ಪ್ರಿಯಾಂಕ ಚೋಪ್ರಾ ದ್ವಿತೀಯ ಸ್ಥಾನದಲ್ಲಿದ್ದರೆ 44.1 ಮಿಲಿಯನ್ ಫಾಲೋವರ್ ಗಳನ್ನು ಹೊಂದಿರುವ ದೀಪಿಕಾ ಪಡುಕೋಣೆ ತೃತೀಯ ಸ್ಥಾನದಲ್ಲಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :