ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಮಾಡಿದ್ದಾರೆ. ಏಕದಿನ ಪಂದ್ಯಗಳಲ್ಲಿ ಅತೀ ವೇಗವಾಗಿ 9000 ರನ್ ಪೂರೈಸಿದ ಆಟಗಾರ ಎಂಬ ದಾಖಲೆಗೆ ಕೊಹ್ಲಿ ಭಾಜನರಾಗಿದ್ದಾರೆ. ಅಲ್ಲದೆ, 2017 ನೇ ಸಾಲಿನಲ್ಲಿ ಏಕದಿನ ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ ಮನ್ ಎಂಬ ವಿಶ್ವದಾಖಲೆಯನ್ನೂ ಮಾಡಿದ್ದಾರೆ.201 ನೇ ಏಕದಿನ ಪಂದ್ಯವಾಡಿದ ಕೊಹ್ಲಿ31