ಕೊಲೊಂಬೊ: ಶ್ರೀಲಂಕಾ ವಿರುದ್ಧ ನಾಲ್ಕನೇ ಏಕದಿನ ಪಂದ್ಯದ ಮೂಲಕ 300 ನೇ ಏಕದಿನ ಪಂದ್ಯವಾಡಿದ ಕ್ರಿಕೆಟಿಗ ಧೋನಿಗೆ ನಾಯಕ ವಿರಾಟ್ ಕೊಹ್ಲಿ ಉಡುಗೊರೆಯೊಂದನ್ನು ನೀಡಿದ್ದಾರೆ. ಪಂದ್ಯದ ಆರಂಭಕ್ಕೂ ಮೊದಲು ಚೊಚ್ಚಲ ಪಂದ್ಯವಾಡುತ್ತಿರುವ ಶಾರ್ದೂಲ್ ಠಾಕೂರ್ ಗೆ ಟೀಂ ಇಂಡಿಯಾ ಕ್ಯಾಪ್ ನೀಡಿದ ನಂತರ ಆಟಗಾರರು ಧೋನಿಗೆ ಸುತ್ತುವರಿದು ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ನಾಯಕ ಕೊಹ್ಲಿ ತಮ್ಮ ನೆಚ್ಚಿನ ಕ್ಯಾಪ್ಟನ್ ಗೆ ಪ್ಲಾಟಿನಂ ಬ್ಯಾಟ್ ಒಂದನ್ನು ಉಡುಗೊರೆಯಾಗಿ ಇತ್ತು ಗೌರವಿಸಿದರು.