ಇಂಧೋರ್: ಆಸ್ಟ್ರೇಲಿಯಾ ವಿರುದ್ಧ ತೃತೀಯ ಏಕದಿನ ಪಂದ್ಯ ಮತ್ತು ಸರಣಿ ಗೆಲುವು ಸಾಧನೆ ಮಾಡಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಡ್ರೆಸ್ಸಿಂಗ್ ರೂಂನ ರಹಸ್ಯವೊಂದನ್ನು ಬಿಚ್ಚಿಟ್ಟಿದ್ದಾರೆ.ಹಾರ್ದಿಕ್ ಪಾಂಡ್ಯ ನಾಲ್ಕನೇ ಕ್ರಮಾಂಕದಲ್ಲಿ ಆಡಲಿಳಿದಿದ್ದು ಎಲ್ಲರಿಗೂ ಅಚ್ಚರಿಯುಂಟು ಮಾಡಿತ್ತು. ತಂಡದ ನಿರ್ಧಾರಕ್ಕೆ ತಕ್ಕಂತೆ ಆಡಿದ ಪಾಂಡ್ಯ ನಾಯಕನ ಹೊಗಳಿಕೆ ಪಾತ್ರರಾದರು.ಅಷ್ಟಕ್ಕೂ ಪಾಂಡ್ಯಗೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಸಿಕ್ಕಿದ್ದು ಹೇಗೆಂದು ಕೊಹ್ಲಿ ಬಹಿರಂಗಪಡಿಸಿದ್ದಾರೆ. ಪಾಂಡ್ಯಗೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಸಿಗಲು ಕಾರಣ ರವಿಶಾಸ್ತ್ರಿ.