ಸಿಡ್ನಿ: ಕಾಫಿ ವಿತ್ ಕರಣ್ ಶೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯವಾಗಿ ಕಾಮೆಂಟ್ ಮಾಡಿದ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗೆ ಮೊದಲು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಪತ್ರಕರ್ತರು ಹಾರ್ದಿಕ್ ಪಾಂಡ್ಯ ವಿವಾದದ ಬಗ್ಗೆ ಪ್ರಶ್ನಿಸಿದಾಗ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ.ಭಾರತೀಯ ಕ್ರಿಕೆಟ್ ತಂಡ ಖಂಡಿತಾ ಇಂತಹ ಕಾಮೆಂಟ್ ಗಳನ್ನು ಪ್ರೋತ್ಸಾಹಿಸುವುದಿಲ್ಲ. ಒಬ್ಬ ಜವಾಬ್ಧಾರಿಯುತ ಕ್ರಿಕೆಟಿಗರಾಗಿ ನಾವು ಸಾರ್ವಜನಿಕ ವೇದಿಕೆಗಳಲ್ಲಿ ಇಂತಹ ಹೇಳಿಕೆಗಳನ್ನು ನೀಡಬಾರದು.