ದುಬೈ: ಆಸ್ಟ್ರೇಲಿಯಾ ಟೆಸ್ಟ್ ಸರಣಿ ಆರಂಭವಾದಾಗಿನಿಂದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಯಾಕೋ ಕ್ಲಿಕ್ ಆಗಿಲ್ಲ. ಎರಡೂ ಪಂದ್ಯಗಳ ನಾಲ್ಕೂ ಇನಿಂಗ್ಸ್ ಗಳಲ್ಲಿ ಕಳಪೆ ಮೊತ್ತಕ್ಕೆ ಔಟಾದ ಕೊಹ್ಲಿ ಅದಕ್ಕೆ ತಕ್ಕ ಬೆಲೆ ತೆತ್ತಿದ್ದಾರೆ. ಆಸ್ಟ್ರೇಲಿಯಾ ಸರಣಿ ಆರಂಭವಾಗುವುದಕ್ಕೆ ಮೊದಲು ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದರು. ದ್ವಿತೀಯ ಟೆಸ್ಟ್ ಮುಗಿದ ಮೇಲೆ ಮೂರನೇ ಸ್ಥಾನಕ್ಕೆ ಜಾರಿದ್ದರು. ಇದೀಗ ಬಿಡುಗಡೆಗೊಂಡ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.ಆದರೆ