ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ದ್ವಿತೀಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ತನ್ನ ಸ್ಟಾರ್ ಆರಂಭಿಕ ರೋಹಿತ್ ಶರ್ಮಾರನ್ನು ಕಣಕ್ಕಿಳಿಸಿರಲಿಲ್ಲ.ನಿರ್ಣಾಯಕ ಪಂದ್ಯದಲ್ಲಿ ರೋಹಿತ್ ಶರ್ಮಾರನ್ನು ಹೊರಗಿಟ್ಟಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ. ಆದರೆ ಇದರ ಬಗ್ಗೆ ಕೊಹ್ಲಿ ಆರಂಭದಲ್ಲಿಯೇ ಸಮಜಾಯಿಷಿ ನೀಡಿದ್ದಾರೆ.ರೋಹಿತ್ ತುಂಬಾ ಸಮಯದಿಂದ ಕ್ರಿಕೆಟ್ ಆಡಿ ಬಳಲಿದ್ದಾರೆ. ಅವರಿಗೆ ಸ್ವಲ್ಪ ವಿಶ್ರಾಂತಿ ನೀಡೋಣವೆಂದು ಈ ಪಂದ್ಯದಲ್ಲಿ ಅವರನ್ನು ಕಣಕ್ಕಿಳಿಸುತ್ತಿಲ್ಲ ಎಂದು ಕೊಹ್ಲಿ ಹೇಳಿದ್ದರು. ಆದರೆ ನಿರ್ಣಾಯಕ ಪಂದ್ಯದಲ್ಲಿ