ಅಹಮ್ಮದಾಬಾದ್: ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಬ್ಯಾಟಿಂಗ್ ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿತ್ತು.ಮೊದಲ ಪಂದ್ಯಕ್ಕೆ ಕೆಎಲ್ ರಾಹುಲ್-ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯುತ್ತಾರೆ ಎಂದು ಕಾದಿದ್ದವರಿಗೆ ಕೊಹ್ಲಿ ಶಾಕ್ ನೀಡಿದ್ದರು. ಇನ್ನೆರಡು ಪಂದ್ಯಗಳಿಗೆ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ ಎಂದು ಕೊನೆಯ ಕ್ಷಣದಲ್ಲಿ ಅವರು ನಿರ್ಧಾರ ಪ್ರಕಟಿಸಿದ್ದು ಎಲ್ಲರ ಟೀಕೆಗೆ ಗುರಿಯಾಗಿದೆ.ನಾವು ರೋಹಿತ್ ಬ್ಯಾಟಿಂಗ್ ನೋಡಲೆಂದೇ ಬಂದಿದ್ದೆವು. ಆದರೆ ಅವರಿಲ್ಲ ಎಂದ ತಕ್ಷಣ ನಮಗೆ ಮುಂದೆ