Widgets Magazine

ಆಸ್ಟ್ರೇಲಿಯಾದಲ್ಲಿ ವಿರಾಟ್ ಕೊಹ್ಲಿಗೆ ಸಚಿನ್, ಧೋನಿ ಟಾರ್ಗೆಟ್

ಸಿಡ್ನಿ| Krishnaveni K| Last Modified ಬುಧವಾರ, 25 ನವೆಂಬರ್ 2020 (09:53 IST)
ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಸೀಮಿತ ಓವರ್ ಗಳ ಪಂದ್ಯಗಳನ್ನಾಡಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್, ಧೋನಿ ದಾಖಲೆಗಳನ್ನು ಮುರಿಯುವ ಅವಕಾಶ ಎದುರಾಗಿದೆ.

 
ಕೊಹ್ಲಿ ಇದುವರೆಗೆ ಆಸ್ಟ್ರೇಲಿಯಾ ವಿರುದ್ಧ 17 ಪಂದ್ಯಗಳಲ್ಲಿ ನಾಯಕತ್ವ ವಹಿಸಿದ್ದರು. ಈ ಪೈಕಿ 11 ಗೆಲುವು ಕಂಡಿದ್ದಾರೆ. ಇನ್ನು ಮೂರು ಪಂದ್ಯಗಳನ್ನು ಗೆದ್ದರೆ ಏಕದಿನ ಪಂದ್ಯಗಳಲ್ಲಿ ಆಸೀಸ್ ವಿರುದ್ಧ ಅತೀ ಹೆಚ್ಚು ಗೆಲುವು ಕಂಡ ಭಾರತೀಯ ನಾಯಕ ಎಂಬ ಧೋನಿ ದಾಖಲೆಯನ್ನು ಮುರಿಯಲಿದ್ದಾರೆ.
 
ಇನ್ನು, ಆಸೀಸ್ ವಿರುದ್ಧ ಅತೀ ಹೆಚ್ಚು ಏಕದಿನ ಶತಕ ದಾಖಲು ಮಾಡಿರುವುದು ಸಚಿನ್ ತೆಂಡುಲ್ಕರ್. ಅವರು ಒಟ್ಟು 71 ಪಂದ್ಯಗಳಿಂದ 9 ಶತಕ ಗಳಿಸಿದ್ದಾರೆ. ಕೊಹ್ಲಿ ಈಗ 40 ಪಂದ್ಯಗಳಿಂದ 8 ಶತಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನೊಂದು ಶತಕ ದಾಖಲಿಸಿದರೆ ತೆಂಡುಲ್ಕರ್ ಸಾಧನೆಯನ್ನು ಸರಿಗಟ್ಟಲಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :