ರೋಹಿತ್ ಶರ್ಮಾ ಇಲ್ಲದ ಫೋಟೋ ಪ್ರಕಟಿಸಿದ್ದಕ್ಕೆ ಟ್ರೋಲ್ ಆದ ವಿರಾಟ್ ಕೊಹ್ಲಿ

ಮುಂಬೈ| Krishnaveni K| Last Modified ಶುಕ್ರವಾರ, 2 ಆಗಸ್ಟ್ 2019 (10:17 IST)
ಮುಂಬೈ: ಟೀಂ ಇಂಡಿಯಾದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದರೂ ಇವರಿಬ್ಬರ ನಡುವೆ ನಡೆಯುತ್ತಿರುವ ಸೋಷಿಯಲ್ ಮೀಡಿಯಾ ವಾರ್ ಎಲ್ಲವನ್ನೂ ಸಾರಿ ಹೇಳುತ್ತಿದೆ.

 
ಮೊನ್ನೆಯಷ್ಟೇ ರೋಹಿತ್ ಶರ್ಮಾ ತಾನು ಕೇವಲ ತಂಡಕ್ಕಾಗಿ ಅಲ್ಲ ದೇಶಕ್ಕಾಗಿ ವಿದೇಶಕ್ಕೆ ಹೋಗಿ ಆಡುತ್ತೇನೆ ಎಂದು ಟ್ವೀಟ್ ಮಾಡಿ ಟಾಂಗ್ ಕೊಟ್ಟಿದ್ದರು. ಇದೀಗ ಕೊಹ್ಲಿ ಇನ್ ಸ್ಟಾಗ್ರಾಂನಲ್ಲಿ ಫೋಟೋವೊಂದನ್ನು ಪ್ರಕಟಿಸಿದ್ದು ಅದನ್ನು ನೋಡಿ ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.
 
ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಹೊರತಾಗಿ ಉಳಿದ ಸದಸ್ಯರೊಂದಿಗೆ ಕೊಹ್ಲಿ ಫೋಟೋ ಪ್ರಕಟಿಸಿ ಅದರ ಜತೆಗೆ ನನ್ನ ತಂಡ ಎಂದು ಬರೆದುಕೊಂಡಿದ್ದರು. ಇದನ್ನು ನೋಡಿ ರೋಹಿತ್ ಮತ್ತು ಶಿಖರ್ ಎಲ್ಲಿ ಎಂದು ನೆಟ್ಟಿಗರು ಕಾಮೆಂಟ್ ಮಾಡಲಾರಂಭಿಸಿದ್ದಾರೆ. ಅಷ್ಟೇ ಅಲ್ಲ, ತಂಡ ಎರಡು ಗ್ರೂಪ್ ಆಗಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :