ನವದೆಹಲಿ : ವಿದೇಶಿ ನೆಲದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಟೆಸ್ಟ್ ಪಂದ್ಯದಲ್ಲಿ ಸೋಲನುಭವಿಸಿದ್ದ ಭಾರತ ತಂಡ ಟೀಕೆಗೆ ಗುರಿಯಾಗಿದ್ದು, ಅದರಲ್ಲೂ ವಿರಾಟ್ ಕೊಹ್ಲಿ ಅವರ ನಾಯಕತ್ವದ ಬಗ್ಗೆ ಹಲವರು ಟೀಕಿಸಿದ್ದರು. ಆದರೆ ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಮಾತ್ರ ಕೊಹ್ಲಿ ಅವರ ಬೆಂಬಲಕ್ಕೆ ನಿಂತಿದ್ದಾರೆ. ವಿರಾಟ್ ಅವರಿಗೆ ನಾಯಕತ್ವದಲ್ಲಿ ತಾಳ್ಮೆಯಿಂದ ಇರುವಂತೆ ಗಂಗೂಲಿ ಅವರು ಸಲಹೆ ನೀಡಿದ್ದಾರೆ. ಕೊಹ್ಲಿ ಅವರು ನಾಯಕತ್ವವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುತ್ತಾರೆ