ಮುಂಬೈ: ಅನಿಲ್ ಕುಂಬ್ಳೆ ರಾಜೀನಾಮೆಯಿಂದ ತೆರವಾದ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಮುಂದಿನ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈಗಾಗಲೇ ಬಿಸಿಸಿಐ ಅರ್ಜಿ ಸಲ್ಲಿಸಿದ್ದವರಲ್ಲಿ ಆಸ್ಟ್ರೇಲಿಯಾದ ಟಾಮ್ ಮೂಡಿ, ವೀರೇಂದ್ರ ಸೆಹ್ವಾಗ್ ನಡುವೆ ಪೈಪೋಟಿಯಿದೆ. ಅವರಲ್ಲದೆ ಕಿರಿಯರ ತಂಡಕ್ಕೆ ಕೋಚ್ ಆಗಿ ಕೆಲಸ ಮಾಡುತ್ತಿರುವ ದ್ರಾವಿಡ್ ಬಗ್ಗೆ ಆಟಗಾರರಲ್ಲಿ ಸದಭಿಪ್ರಾಯವಿದೆ.ಹಾರ್ದಿಕ್ ಪಾಂಡ್ಯ ಸೇರಿದಂತೆ ಹಲವು ಟೀಂ ಇಂಡಿಯಾ ಆಟಗಾರರು ದ್ರಾವಿಡ್ ಗರಡಿಯಲ್ಲಿ ಪಳಗಿದವರು. ಹೀಗಾಗಿ