ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಬಾಕ್ಸಿಂಗ್ ಡೇ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಯಾರಾಗಲಿದ್ದಾರೆ? ಟೆಸ್ಟ್ ತಂಡಕ್ಕೆ ಆಯ್ಕೆಗಾರರ ವೃದ್ಧಿಮಾನ್ ಸಹಾ ಮತ್ತು ರಿಷಬ್ ಪಂತ್ ರೂಪದಲ್ಲಿ ಇಬ್ಬರು ವಿಕೆಟ್ ಕೀಪರ್ ಗಳನ್ನು ಆಯ್ಕೆ ಮಾಡಿದ್ದಾರೆ. ಆ ಪೈಕಿ ವೃದ್ಧಿಮಾನ್ ಸಹಾ ಈಗಷ್ಟೇ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಟೆಸ್ಟ್ ಸರಣಿಗೆ ಇನ್ನೂ ಒಂದು ತಿಂಗಳು ಬಾಕಿ ಇರುವ ಕಾರಣ ಅವರು ಟೆಸ್ಟ್ ಸರಣಿ ವೇಳೆಗೆ ಚೇತರಿಸಿಕೊಳ್ಳಲಿದ್ದಾರೆ.